Gallery

ಕತೀ ಬರಿಯೂ ಮೊದಲ …. !


ಡಾ. ಸಿದ್ರಾಮ ಕಾರಣಿಕ

ಪೆನ್ನು-ಹಾಳೆ ಎರಡೂ ಮುಂದ ಅದಾವು. ಮಂದಿಯ ಮಾತುಗಳೂ ತಲೆಯೊಳಗ ಗುಂಯ್ಞ ಅನ್ನಾಕತ್ತಾವು. ಒಮ್ಮೊಮ್ಮೆ ಬರೀಬೇಕಾಗಿರೋದು ಏನ ಅನ್ನೋದ ಮರ್ತ ಹೋದಾಂಗ ಅನ್ನಿಸಾಕತ್ತೀತು. ನಡು ನಡುವ ನೆನಪುಗೋಳು ಹದ್ದು ಬಂದು ತಲಿ ಮ್ಯಾಲ ಕುಂತ ಕಿರುಚಿ, ಕುಕ್ಕಾಕತ್ತಿತ್ತು ! ಕತೀ ಬರೀಬೇಕು ಅನ್ನಿಸಿತು. ಹಂಗಾರ ಹೆಂಥಾ ಕತಿ ಬರಿಯೂದು … ? ಮುಂದ ಇತ್ತಲ್ಲ ಗರಿಗರಿ ಮಡಿಕಿ ಹಾಕಿದ ಪತ್ರಿಕೆ. ಹೆಣ್ಮಕ್ಕಳ ಮ್ಯಾಲ ಅತ್ಯಾಚಾರ … ದಿನಕ್ಕೊಂದು ಹಿಂತಾವು ನಡಿಯಾಕ ಹತ್ತ್ಯಾವು. ಅವುನ್ನ ದಿನ್ನಾ ಓದುತ್ತ ಓದುತ್ತ ಇರುವಾಗ ಟೀವ್ಯಾಗ ಹಂಥದ್ದ ಘಟನಾ ಮರಕಳಿಸಿದ ಬಗ್ಗಿ ಸುದ್ದಿ ಬಿತ್ತರ ಆಗ್ತೇತಿ. ಇದನ್ನ ಇಟ್ಟುಕೊಂಡ ಕತಿ ಬರದರ ಹ್ಯಾಂಗ್ ? ಜ್ವಲಂತ ವಿಷಯಾನೂ ಆಗ್ತೇತಿ. ಅವಾರ್ಡ್ ಬಂದ್ರೂ ಬರಬೋದಲಾ ? ಹಂಗಾರ ಎಲ್ಲಿಂದ ಸುರು ಮಾಡ್ಲಿ ? ಹುಡುಗ-ಹುಡುಗಿ, ಕಾಲೇಜು, ಪ್ರೇಮ, ವೈರ ಹೊಡೆದಾಟ, ಅತ್ಯಾಚಾರ, ಕೊಲೆ … ? ಇದೆಲ್ಲ ಹಳಸಲು ಸಿನೇಮಾ ಕತಿ ಹಾಂಗ ಅನ್ನಿಸ್ತೇತ್ಯಲಾ ! ಬ್ಯಾಡಾ, ಹೀಂಗ ಬರೀಬಾರದ್ ನಾ…. ಮತ್ತೇ ? ಅಪ್ಪ-ಅವ್ವ, ವಾತ್ಸಲ್ಯ ವಂಚಿತ ವಿದ್ಯಾರ್ಥಿ, ಕಾಲೇಜು, ಪ್ರೇಮ, ಹೊಸ ಬದುಕಿನ ಆಸೆ ಆನಂತರ … … … ನಂಬಿಕೀ ದ್ರೋಹ ! ಇದೂ ಚರ್ವಿತ ಚರ್ವಣನ ಅನ್ನಿಸೂದಿಲ್ಲ !
ಹಂಗಾರ ಬರಿಯೂದಾದ್ರೂ ಏನ ಮತ್ತ ? ಈ ಕತೆ ಬರಿಯೋ ಗೋಜಲ ಬ್ಯಾಡಂತ ಬಿಟ್ಟ ಬಿಡ್ಲಿ.
ಆಕೀನೂ ಹೀಂಗ ಹೇಳಿದ್ಳಲಾ ? ‘ನಮ್ಮ ಬದುಕ ಕತಿ ಆಗಬಾರ್ದು. ದೋಖಾ ಅಂತ ಅಲ್ಲಾ. ಮನಿಯೊಳಗಿನ ಪರಿಸ್ಥಿತೀನ ಹಂಗ ಏತಿ. ನಂದ ಹೆಂಗಾರ ನಡಿತೇತಿ. ನೀ ಮೊದಲ ಬದುಕ ಕಟ್ಕೋ’ ಎಷ್ಟು ಸಹಜವಾಗಿ ಹೇಳಿದ್ದಳಲ್ಲ ಆಕೆ ! ಆಕೆಯ ತಪ್ಪಾದರೂ ಏನು … ನಾನೇ ಒಂದಿಷ್ಟು ಎಡಬಿಡಂಗಿ ಥರಾ ವರ್ತಿಸಿಬಿಟ್ಟಿದ್ದೀನಲ್ಲ ! ಹೋಗ್ಲಿ… ಆ ಸುದ್ದಿ ಈಗ್ಯಾಕ ? ಒಂದ ಕತೀ ಬರಿಬೇಕ ಅಷ್ಟ. ನಾ ಸಣ್ಣಾಂವ ಇದ್ದಾಗ ಸಾಲೀಗಿ ಹೋಗ್ತೇನ ಅಂತ ಹಟಾ ಹಿಡದ ಗೆದ್ದದ್ದು, ಹೆಂಗೋ ಏನೋ ಮಾಡಿಕೊಂಡು ಕಾಲೇಜು ಮೆಟ್ಟಿಲು ತುಳದದ್ದು… … ಛೇ ! ಇಲ್ಲಿ ನಾ ಆತ್ಮ ಚರಿತ್ರಾ ಬರ್ಯಾಕತ್ತೇನೇನು ?
ಬ್ಯಾಡ ಬಿಡು ; ಈ ಬರಿಯೋದ ಅಂದ್ರ… ಯಾಕೋ ತ್ರಾಸಿನ ಕೆಲಸ !
ಯಾಕಂದ್ರ ನಾವ್ ಬರಿದದ್ದ ನೋಡಾವ್ರು ಇರ್ತಾರೇನೋ ಖರೆ ; ಮೆಚ್ಕೊಳ್ಳಾವ್ರೂ ಇರ್ತಾರು. ಆದ್ರ ಬರಿಯೂ ಬರಹದಾಗೂ ರಾಜಕೀ ಮಾಡಿ ಮ್ಯಾಲ-ಕೆಳಗ ಮಾಡ್ತಾರಲ್ಲ …
ಅದಕ್ಕ …
ಬರಿಯೋದ ಬ್ಯಾಡ ಅನ್ನಿಸ್ತೇತಿ !
ನೀವ್ ಏನಂತೀರಿ ?

Leave a Reply

Please log in using one of these methods to post your comment:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s